ಭಾನುವಾರ, ಅಕ್ಟೋಬರ್ 04, 2009

ಚೆಲುವ ಕನ್ನಡ ನಾಡಿನ ಕವಿಯ ೧೨೫ನೇ ಜಯಂತೋತ್ಸವ

h-n-r

ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು

ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು ||ಪ||


ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮೆರೆದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು


ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು

ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು

ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು

ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು*


ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು

ಕಾವೇರಿ ಗೋದೆಯರು ಮೈದೊಳೆವ ನಲುನಾಡು

ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು.


(*ವಿದ್ಯಾರಣ್ಯ)


ಹುಯಿಲುಗೋಳ ನಾರಾಯಣರಾವ್ (೧೮೮೪-೧೯೭೧)

ಮುಂದೆ ಓದಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ